ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ. ಆರ್. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ.01: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್. ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲೆಯ 131ನೇಯ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ವಹಿಸಿಕೊಂಡಿದ್ದಾರೆ.

ಡಾ. ರಾಜೇಂದ್ರ ಕೆ. ವಿ. ವರ್ಗಾವಣೆಯಿಂದ ಜಿಲ್ಲಾಧಿಕಾರಿ ಸ್ಥಾನ ತೆರವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ರವಿಕುಮಾರ್ 2012ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ಡಾ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Also Read  ಆತೂರು: ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ಅಪಘಾತ ➤ ತಾಯಿಯ ಕಣ್ಣೆದುರಲ್ಲೇ ಪ್ರಾಣಬಿಟ್ಟ ದ್ವಿಚಕ್ರ ವಾಹನ ಸವಾರ

error: Content is protected !!
Scroll to Top