ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್

(ನ್ಯೂಸ್ ಕಡಬ) newskadaba.com ನ.07: ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳ ಕಾರು ಮಾದರಿಗಳಿಗೆ ಟಕ್ಕರ್ ನೀಡಲು ಈ ಬಾರಿ ಹೊಸ ಪ್ಲ್ಯಾನ್ ರೂಪಿಸಿದೆ. ಹೊಸ ಕಾರು ಮಾದರಿಯ ಯೋಜನೆಯನ್ನು ಈಗಾಗಲೇ ಖಚಿತಪಡಿಸಿರುವ ಹೋಂಡಾ ಕಂಪನಿಯು ಪ್ರಮುಖ ಕಂಪ್ಯಾಕ್ಟ್ ಎಸ್ ಯುವಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹೋಂಡಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ ಜೊತೆ ವಿನ್ಯಾಸದಲ್ಲೂ ಮಹತ್ವದ ಬದಲಾವಣೆ ತಂದಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರಿಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಥಳಾವಕಾಶ ಒದಗಿಸಲಿದೆ. ಹೊಸ ಡಬ್ಲ್ಯುಆರ್-ವಿ ಕಾರು ಹೊಸ ತಲೆಮಾರಿನ ಸಿಟಿ ಸೆಡಾನ್ ಮತ್ತು ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರುಗಳ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದೆ. ಇದರಲ್ಲಿ ಕಂಪನಿಯು ಟ್ಯಾಪರಿಂಗ್ ರೂಫ್ ಲೈನ್, ಆ್ಯಂಗುಲರ್ ಟೈಲ್ ಗೇಟ್, ಸ್ಪೋರ್ಟಿ ಶೋಡ್ಡರ್ ಲೈನ್, ಬಾಡಿ ಕ್ಲ್ಯಾಡಿಂಗ್, ವ್ಹೀಲ್ ಆರ್ಚ್ ಮತ್ತು 16 ಇಂಚಿನ ಅಲಾಯ್ ವ್ಹೀಲ್ ಸೌಲಭ್ಯ ಪಡೆದುಕೊಳ್ಳಲಿದೆ. ಹಾಗೆಯೇ ಕಾರಿನ ಒಳಭಾಗದಲ್ಲೂ ಹಲವು ಹೊಸ ಸೌಲಭ್ಯಗಳಿದ್ದು, ಸ್ಪೋರ್ಟಿ ವರ್ಷನ್ ನಲ್ಲಿ ಆಲ್ ಬ್ಲ್ಯಾಕ್ ಇಂಟಿರಿಯರ್, ಅನಲಾಗ್ ಡಯಲ್, 4.2 ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ ಪ್ಲೇ, ಮಲ್ಟಿ ಜೋನ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಹೊಂದಿರಲಿದೆ.

Also Read  ಭಾರತದ ಶೇ.90ಕ್ಕೂ ಹೆಚ್ಚು ಸಿಬ್ಬಂದಿಯನ್ನ ಕೆಲಸದಿಂದ ತೆಗೆದುಹಾಕಿದ ‘ಟ್ವಿಟರ್’

ಹೊಸ ಕಾರಿನಲ್ಲಿ ಹೋಂಡಾ ಕಂಪನಿಯು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಇದು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಮೂಲಕ ಹೊಸ ಕಾರು 121 ಬಿಎಚ್ ಪಿ ಮತ್ತು 145 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿನ ಗೇರ್ ಬಾಕ್ಸ್ ಆಯ್ಕೆಯನ್ನೇ ಹೊಸ ಕಾರಿನಲ್ಲಿ ಬಳಕೆ ಮಾಡಲಾಗಿದೆ. ಹೊಸ ಕಾರಿನಲ್ಲಿ ಈ ಬಾರಿಗೆ ಗರಿಷ್ಠ ಸುರಕ್ಷತೆಗಾಗಿ 6 ಏರ್ ಬ್ಯಾಗ್, ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಪ್ರಮುಖ ಫೀಚರ್ಸ್ ಗಳಿವೆ.

error: Content is protected !!
Scroll to Top