ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಅಬ್ಬರ

(ನ್ಯೂಸ್ ಕಡಬ) newskadaba.com ನ.07: ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿ ಶುಷ್ಕ ವಾತಾವರಣ ಹೆಚ್ಚಾಗಿದೆ. ಆದರೂ ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಶುಷ್ಕ ವಾತಾವರಣ ಉಂಟಾಗಿದೆ. ಇದರ ನಡುವೆ ತುಂತುರು ಮಳೆಯೂ ಸುರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.

Also Read  ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 9ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ (ನ. 9) ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಕೂಡ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ. ಧಾರವಾಡ, ಬೆಳಗಾವಿ, ಹಾವೇರಿ, ರಾಯಚೂರಿನಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಉಳಿದೆಡೆ ಒಣ ಹವೆ ಮುಂದುವರೆಯಲಿದೆ.

error: Content is protected !!
Scroll to Top