ಸೈಬರ್ ಕ್ರೈಮ್ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು?

(ನ್ಯೂಸ್ ಕಡಬ) newskadaba.com ನ.14: ಬೆಂಗಳೂರು ಪೊಲೀಸರು ಇತ್ತೀಚೆಗಷ್ಟೆ ಪರಿಚಯಿಸಿರುವ “ಗೋಲ್ಡನ್ ಅವರ್” ಎಂಬ ಸೌಲಭ್ಯ ಬಳಿಸಿದರೆ ಸೈಬರ್ ವಂಚಕರ ಜಾಲದಿಂದ ಕಳೆದುಕೊಂಡ ಹಣವನ್ನು ವಾಪಸು ಪಡೆಯಬಹುದು. ಈಗಾಗಲೇ ಈ ಗೋಲ್ಡನ್ ಅವರ್ ಸೌಲಭ್ಯ ಬಳಿಸಿಕೊಂಡು ಸಾವಿರಾರು ಜನರು ಸೈಬರ್ ವಂಚಕ ಜಾಲದಿಂದ ಕಳೆದುಕೊಂಡಿದ್ದ ಹಣವನ್ನು ಮರಳಿ ವಾಪಸು ಪಡೆದಿದ್ದಾರೆ.

ಯಾರಾದರೂ ಸೈಬರ್ ವಂಚನೆ ಮೂಲಕ ಹಣ ಕಳೆದುಕೊಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯಾದ 1930ಕ್ಕೆ ಕರೆ ಮಾಡಿ ವಿಷಯ ತಿಳಿಸಿದರೆ ಸೈಬರ್ ಕ್ರೈಂ ವಿಭಾಗದ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ನಿಮ್ಮ ಮಾಹಿತಿಯನ್ನು ಆಧರಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡುತ್ತಾರೆ. ಇದರಿಂದ ನಿಮ್ಮ ಖಾತೆಯಿಂದ ಬೇರೆಯವರಿಗೆ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಈ ಮೂಲಕ ಸೈಬರ್ ವಂಚಕರ ಮೋಸದ ಜಾಲ ನಿಯಂತ್ರಣಕ್ಕೆ ಮಹತ್ವದ ಅವಕಾಶ ಕಲ್ಪಿಸಲಾಗಿದೆ.

Also Read  ಟ್ರ್ಯಾಕ್ಟರ್ ನ ಚಕ್ರದಡಿಯಲ್ಲಿ ಸಿಲುಕಿ 5 ವರ್ಷದ ಮಗು ಮೃತ್ಯು ➤ ಬೇಸತ್ತ ಚಾಲಕ ಆತ್ಮಹತ್ಯೆಗೆ ಶರಣು

ಆರ್‌ಬಿಐ ಹೇಳುವ ಪ್ರಕಾರ, ನೀವು ಆನ್​ಲೈನ್ ಮೋಸಕ್ಕೆ ಒಳಗಾದರೆ ತಕ್ಷಣ ಬ್ಯಾಂಕಿಗೆ ಈ ಬಗ್ಗೆ ಮಾಹಿತಿ ನೀಡಿದರೆ, ನಿಮಗೆ ಆಗಬಹುದಾದ ನಷ್ಟವನ್ನು ತಪ್ಪಿಸಬಹುದು. ಹೆಚ್ಚಿನ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಹಣಕಾಸು ವಂಚನೆ ವಿಮೆಯನ್ನು ಹೊಂದಿವೆ. ಹಣ ವರ್ಗಾವಣೆಯ ಸಮಯದಲ್ಲಿ ವಂಚನೆಯಾಗಿದ್ದರೆ, ಗ್ರಾಹಕರು ತಕ್ಷಣವೇ ತಮ್ಮ ಬ್ಯಾಂಕ್‌ಗೆ ಮಾಹಿತಿ ನೀಡಬೇಕು. ಬ್ಯಾಂಕಿಗೆ ಸೂಚನೆ ನೀಡಿದ ನಂತರ, ವಂಚನೆಯ ಬಗ್ಗೆ ತಕ್ಷಣವೇ ವಿಮಾ ಕಂಪನಿಗೆ ವರದಿ ಮಾಡಲಾಗುತ್ತದೆ. ಈ ರೀತಿಯಾಗಿ ಕೂಡ ನಿಮ್ಮ ಹಣವನ್ನು ಪಡೆಯಬಹುದು.

error: Content is protected !!
Scroll to Top