108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ವೀಕ್ಷಿಸಲು ಪ್ರವೇಶ ಶುಲ್ಕವಿಲ್ಲ

(ನ್ಯೂಸ್ ಕಡಬ) newskadaba.com ನ.15: ಭಾರತದ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರ ಶುಕ್ರವಾರ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಆದರೆ ಪ್ರವಾಸಿಗರು ಅಲ್ಲಿಗೆ ಭೇಟಿ ನೀಡಲು ಇನ್ನೂ ಅವಕಾಶ ನೀಡಿಲ್ಲ ಎಂಬುದು ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಮೆ ಅನಾವರಣಗೊಂಡ ಬಳಿಕ ಶನಿವಾರ ಮತ್ತು ಭಾನುವಾರ ನೂರಾರು ಜನರು ಪ್ರತಿಮೆ ವೀಕ್ಷಣೆ ಮಾಡಲು ತೆರಳಿದರು. ಆದರೆ ಗೇಟ್ ಹಾಕಿರುವ ಕಾರಣ ಅವರು ನಿರಾಸೆಯಿಂದ ವಾಪಸ್ ಆದರು. ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಪ್ರತಿಮೆ ಲೋಕಾರ್ಪಣೆ ಮಾಡಿದರೂ ಅದನ್ನು ವೀಕ್ಷಿಸಲು ಏಕೆ ಅವಕಾಶವಿಲ್ಲ? ಎಂದು ಪ್ರಶ್ನಿಸಿದ್ದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಕೆಂಪೇಗೌಡ ಪ್ರತಿಮೆಯ ಸ್ಥಳಕ್ಕೆ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ. ಎನ್. ಅಶ್ವಥ ನಾರಾಯಣ್ ಸೋಮವಾರ ಭೇಟಿ ನೀಡಿದರು. ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

ಸಚಿವರು ಮಾತನಾಡಿ, “ಕೆಂಪೇಗೌಡ ಪ್ರತಿಮೆ ಸ್ಥಳವನ್ನು ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಅವರಿಗೆ ಸೂಕ್ತ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಇಲ್ಲಿಗೆ ಪ್ರವಾಸಿಗರು ಆಗಮಿಸುತ್ತಿರುವುದು ಸಂತಸ ತಂದಿದೆ. “108 ಅಡಿ ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ಯಾವುದೇ ಶುಲ್ಕ ಇಲ್ಲ. ಶೀಘ್ರದಲ್ಲೇ ಮತ್ತಷ್ಟು ಸೌಲಭ್ಯವನ್ನು ಪ್ರವಾಸಿಗರಿಗೆ ಒದಗಿಸಲಾಗುತ್ತದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರತಿಮೆ ವೀಕ್ಷಿಸಲು ವ್ಯವಸ್ಥಿತ ಅವಕಾಶ ನೀಡಲಾಗುತ್ತದೆ” ಎಂದು ಹೇಳಿದರು.

error: Content is protected !!
Scroll to Top