ಸರ್ಕಾರಿ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಮಹತ್ವದ ನಿರ್ಧಾರ ಕೈಗೊಂಡಿವೆ. ಈ ನಿರ್ಧಾರದಿಂದ ಗ್ರಾಹಕರು ಬೆಚ್ಚಿಬಿದ್ದಿದ್ದಾರೆ. ಇದರಿಂದ ಸಿಲಿಂಡರ್ ಬಳಸುವವರ ಜೇಬಿಗೆ ಕತ್ತರಿ ಬೀಳಲಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್ಪಿಸಿಎಲ್), ಭಾರತ್ ಪೆಟ್ರೋಲ್ ಕಾರ್ಪೊರೇಷನ್ (ಬಿಪಿಸಿಎಲ್) ಆಯಿಲ್ನಂತಹ ತೈಲ ಮಾರುಕಟ್ಟೆ ಕಂಪನಿಗಳು ಈಗ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಇಂಧನ ಕಂಪನಿಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳಿಗೆ ರೂ. 200 ರಿಂದ ರೂ. 300 ರಿಯಾಯಿತಿ ಕೊಡುಗೆಗಳು ಸಿಗುತ್ತಿತ್ತು. ಆದರೆ ಈಗ ಈ ಪ್ರಯೋಜನವನ್ನು ತೆಗೆದುಹಾಕುತ್ತಿರುವುದಾಗಿ ಘೋಷಿಸಿದ್ದಾರೆ.