ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ – News Kadaba

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ

(ನ್ಯೂಸ್ ಕಡಬ) newskadaba.com ನ.15: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರ ವೃತ್ತಿಜೀವನದ ಮೈಲೇಜ್ ಹೆಚ್ಚಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಚಿತ್ರದ ಅಬ್ಬರ ಕಡಿಮೆ ಆಗಿಲ್ಲ. ಈ ಸಿನಿಮಾ ಬಗ್ಗೆ ನಿತ್ಯ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇದೆ.

ಈಗ ‘ಕಾಂತಾರ’ ಸಿನಿಮಾ ತುಳುವಿನಲ್ಲಿ ರಿಲೀಸ್ ಆಗಲಿದೆ ಎಂಬ ವಿಚಾರ ಹೊರಬಿದ್ದಿದೆ. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್​​ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಅವರು ಖಚಿತಪಡಿಸಿದ್ದಾರೆ. ಇಡೀ ಸಿನಿಮಾದ ಕಥೆ ಸಾಗೋದು ತುಳುನಾಡಿನಲ್ಲಿ. ಸಿನಿಮಾದ ಕೆಲ ದೃಶ್ಯಗಳಲ್ಲಿ ತುಳು ಭಾಷೆ ಕೂಡ ಬಳಕೆ ಆಗಿದೆ. ತುಳುನಾಡಿನ ವಿಚಾರಗಳನ್ನು ಹೇಳುವ ಈ ಚಿತ್ರವನ್ನು ತುಳುವಿನಲ್ಲೇ ರಿಲೀಸ್ ಮಾಡುವ ಪ್ಲ್ಯಾನ್​ನಲ್ಲಿ ಚಿತ್ರತಂಡ ಇದೆ. ಸದ್ಯ, ಡಬ್ಬಿಂಗ್ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲೇ ತುಳುವಿನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಕರಾವಳಿ ಮಂದಿ ಖುಷಿಪಟ್ಟಿದ್ದಾರೆ.

Scroll to Top