ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ್ದ ತಂದೆ ➤‌ 20 ಸಾವಿರ ರೂ. ದಂಡ ವಿಧಿಸಿದ ಪುತ್ತೂರು ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಕಡಬ, ನ.20. ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ನೀಡಿದ ತಪ್ಪಿಗೆ ವಾಹನ ಮಾಲೀಕನಿಗೆ ನ್ಯಾಯಾಲಯವು 20 ಸಾವಿರ ದಂಡ ವಿಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು 2020ರಲ್ಲಿ ತನ್ನ ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದು, ಆ ಬೈಕ್‌ ಅಪಘಾತವಾಗಿ ಅಪ್ರಾಪ್ತ ಬಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿಯವರು ತೀರ್ಪು ನೀಡಿದ್ದು, ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ್ದಕ್ಕಾಗಿ ವಾಹನ ಮಾಲಿಕನಿಗೆ 20 ಸಾವಿರ ದಂಡ ಪಾವತಿಸುವಂತೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಎಪಿಪಿ ಕವಿತಾ ಅವರು ವಾದಿಸಿದ್ದರು.

Also Read  ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ..!➤ ಹಿಮಂತ ಬಿಸ್ವಾ ಶರ್ಮಾ

error: Content is protected !!
Scroll to Top