ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಾದ ರಾಜ್ಯ ಸರಕಾರ… ಮಂಗಳೂರು ಸೇರಿದಂತೆ ರಾಜ್ಯಾದ್ಯಂತ 10 ಕಾಲೇಜುಗಳ ಸ್ಥಾಪನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 29. ದಕ್ಷಿಣ ಕನ್ನಡದ ಅಡ್ಯಾರ್ ಕಣ್ಣೂರು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉ.ಕ, ಹೈದ್ರಾಬಾದ್, ಕರ್ನಾಟಕ ಹೀಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದ ಹತ್ತು ಪ್ರದೇಶಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿಯೇ ಪ್ರತ್ಯೇಕ ಹತ್ತು ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರಕಾರ ಮುಂದಾಗಿದೆ.

ಇದಕ್ಕಾಗಿ ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದ್ದು, ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳ ನಿರ್ಮಾಣವಾಗಲಿದೆ. ಈ ಹಿಂದೆಯೇ ಕಾಲೇಜು ಸ್ಥಾಪನೆಗೆ ವಕ್ಫ್ ಬೋರ್ಡ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಒಂದೂವರೆ ತಿಂಗಳ ಹಿಂದೆ ಸರಕಾರದಿಂದ ಅನುಮೋದನೆಯೂ ದೊರಕಿತ್ತು. ಪ್ರತೀ ಕಾಲೇಜಿಗೆ 2.50 ಕೋಟಿ ರೂ. ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್ ಗೆ ರಾಜ್ಯ ಸರಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ. ಸಿಎಂ ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭವಾಗುವ ನಿರೀಕ್ಷೆಯಿದೆ.

error: Content is protected !!

Join the Group

Join WhatsApp Group