ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಬ್ರಹ್ಮಣ್ಯ ಷಷ್ಟಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ➤ ಯುವಕ ಆಸ್ಪತ್ರೆಗೆ ದಾಖಲು – News Kadaba

ಸುಬ್ರಹ್ಮಣ್ಯ ಷಷ್ಟಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ➤ ಯುವಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ. 01. ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣಾ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘನೆ ವರದಿಯಾಗಿದೆ.

 

ಹಲ್ಲೆಗೊಳಗಾದವರನ್ನು ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್, ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ ಸ್ಟಾಲ್ ಗೆ ಬಂದ ಪೋಲಿಸ್ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿದ್ದು ಈ ಸಂದರ್ಭ ಸಿಬ್ಬಂದಿಗೆ ನಾನು ಹೆದರಿ 1000 ನೀಡಿದ್ದೇನೆ. ಈ ಹಣ ಸಾಕಾಗುವುದಿಲ್ಲ. 5000 ನೀಡುವಂತೆ ಸಿಬ್ಬಂದಿ ಕೇಳಿದ್ದು, ಅಷ್ಟು ಹಣ ನೀಡದಿದ್ದಾಗ ನನ್ನನ್ನು ಠಾಣೆಯ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎಂದು ಯುವಕ ಆರೋಪಿಸಿದ್ದಾರೆ.

Scroll to Top