ಬೀದಿನಾಯಿಗಳ ದಾಳಿಗೆ ತುತ್ತಾಗಿ ನಾಲ್ಕೂವರೆ ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಭದ್ರಾವತಿ , ಡಿ. 01. ಬೀದಿನಾಯಿಗಳ ದಾಳಿಗೊಳಗಾಗಿ ನಾಲ್ಕುವರೆ ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ.


ಮೃತ ಬಾಲಕನನ್ನು ಸೈಯದ್ ಮದನಿ ಎಂದು ಗುರುತಿಸಲಾಗಿದೆ. ಈತನ ತಂದೆ ಸಂಜೆ ಸುಮಾರು 4 ಗಂಟೆಯ ವೇಳೆಗೆ ಜಮೀನಿಗೆ ಹೋಗಿದ್ದು, ಈ ವೇಳೆ ಬಾಲಕನು ತಂದೆಯನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದಾಗ ಸುಮಾರು 7-8 ಬೀದಿ ನಾಯಿಗಳ ಹಿಂಡೊಂದು ಮಗುವಿನ ಮೇಲೆ ದಾಳಿ ಮಾಡಿ ತಲೆಯನ್ನು ಸೀಳಿ ಎಳೆದಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರಿಂದ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎನ್ನಲಾಗಿದೆ.

Scroll to Top