ಪುತ್ತೂರು: ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ..! ➤‌ ಸಹಸವಾರೆಗೆ ಗಾಯ



(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01. ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಸಹಸವಾರೆ ಗಾಯಗೊಂಡ ಘಟನೆ ಕಾವೇರಿಕಟ್ಟೆ ಸಮೀಪ ನಡೆದಿದೆ.







 

ಗಾಯಗೊಂಡವರನ್ನು ಕೆಮ್ಮಿಂಜೆ ಗ್ರಾಮದ ಮಂಜುನಾಥ ಎಂಬವರ ಪತ್ನಿ ಮೀನಾಕ್ಷಿ(62) ಎಂದು ಗುರುತಿಸಲಾಗಿದೆ. ಮೀನಾಕ್ಷಿಯವರು ಪತಿ ಮಂಜುನಾಥ್ ಅವರೊಂದಿಗೆ ಬೈಕ್‌ನಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ, ಕಾವೇರಿಕಟ್ಟೆ ಸಮೀಪ ರಸ್ತೆಗೆ ಅಡ್ಡಲಾಗಿ ಬಂದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬೈಕ್ ಪಲ್ಟಿಯಾಗಿದೆ. ಘಟನೆಯಿಂದ ಗಾಯಗೊಂಡ ಮೀನಾಕ್ಷಿ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top