ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತ ➤ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದ ಹೋರಾಟ ಸಮಿತಿ

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 01. ಇಲ್ಲಿನ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ನ.30ರ ಮಧ್ಯರಾತ್ರಿಯಿಂದ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸಿದ್ದು, ಇದು ಹೋರಾಟಕ್ಕೆ ಸಿಕ್ಕಿದ ಜಯ ಎಂದು ಹೋರಾಟ ಸಮಿತಿ ಮುಖಂಡರು ತಿಳಿಸಿದ್ದಾರೆ.

ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹ ನಿಲ್ಲಿಸಿದ ಸಂದರ್ಭ ಹೋರಾಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಹೋರಾಟ ಸಮಿತಿ ಮುಖಂಡರುಗಳು ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿದರು. ಹೋರಾಟ ಸಮಿತಿ ಮುಖಂಡರು, ಕಾರ್ಯಕರ್ತರು ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಚಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ‌ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Also Read  ಕುದ್ಮಾರು: ಒಂದೇ ದಿನ ಮೂವರು ಸೋದರರ ಹುಟ್ಟುಹಬ್ಬ

error: Content is protected !!
Scroll to Top