ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಸುಳ್ಯ, ನ.20. ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಾಕಿಲ ಹುಕ್ರಪ್ಪರವರು ಅಲ್ಪಕಾಲದ ಅಸೌಖ್ಯದಿಂದಾಗಿ ಸೋಮವಾರದಂದು ನಿಧನರಾದರು. ಬಾಕಿಲ ಹುಕ್ರಪ್ಪನವರು ಬಿಜೆಪಿಯಿಂದ ಸ್ಪರ್ಧಿಸಿ ಒಂದು ಬಾರಿ ಸುಳ್ಯ ಕ್ಷೇತ್ರದ ಶಾಸಕರಾಗಿದ್ದರು. ಶ್ರಮಜೀವಿಯಾಗಿದ್ದ ಅವರು ನಂತರ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Scroll to Top