ಸುಳ್ಯ: ಮದ್ಯ ಸೇವಿಸಿ ಜೀಪು ಚಲಾಯಿಸಿದ ಚಾಲಕ ➤ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 02. ಕುಡಿದು ಜೀಪು ಚಲಾಯಿಸಿದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿಗೆ ಡಿಕ್ಕಿಯಾಗಿ ವಾಹನಗಳು ಜಖಂಗೊಂಡ ಘಟನೆ ಅಂಬಟೆಡ್ಕ ಬಳಿ ನಡೆದಿದೆ.

 

ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ ಬಂದ ಜೀಪೊಂದು ಚೆನ್ನಕೇಶವ ದೇವಸ್ಥಾನದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದು, ನಂತರ ಅಲ್ಲಿಂದ ಅಂಬಟಡ್ಕದ ಹೊಟೇಲೊಂದರ ಎದುರು ನಿಲ್ಲಿಸಲಾಗಿದ್ದ ನಾಲ್ಕು ಬೈಕ್ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಜೀಪು ಚಾಲಕ ವಿಪರೀತ ಕುಡಿದು ವಾಹನ ಚಲಾಯಿಸುತ್ತಿದ್ದುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Scroll to Top