ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿಜವಾದ ಆರೋಪಿಯ ಬದಲು ಅದೇ ಹೆಸರಿನ ಮತ್ತೋರ್ವನ ಬಂಧನ ➤ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ – News Kadaba

ನಿಜವಾದ ಆರೋಪಿಯ ಬದಲು ಅದೇ ಹೆಸರಿನ ಮತ್ತೋರ್ವನ ಬಂಧನ ➤ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಯನ್ನು ಬಂಧಿಸದೇ ಅದೇ ಹೆಸರಿನ ಬೇರೊಬ್ಬ ವ್ಯಕ್ತಿಯನ್ನು ಬಂಧಿಸಿ ಸುಮಾರು ಒಂದು ವರ್ಷಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸದ ಇಬ್ಬರು ಮಹಿಳಾ ಪೊಲೀಸರು ಸಂತ್ರಸ್ತರಿಗೆ ತಮ್ಮ ಜೇಬಿನಿಂದಲೇ 5 ಲಕ್ಷ ರೂ. ಪರಿಹಾರ ನೀಡುವಂತೆ ಮಂಗಳೂರು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೊಕ್ಸೋ ನ್ಯಾಯಾಲಯವು ಆದೇಶಿಸಿದೆ.

 

ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕಿ ರೇವತಿ ಮತ್ತು ಉಪನಿರೀಕ್ಷಕಿ ರೋಸಮ್ಮ ಪಿ.ಪಿ. ದಂಡ ವಿಧಿಸಲ್ಪಟ್ಟ ಪೊಲೀಸ್ ಅಧಿಕಾರಿಗಳಾಗಿದ್ದಾರೆ. ಸಂತ್ರಸ್ತ ನವೀನ್‌ ಸಿಕ್ವೇರ ಎಂಬವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಅಲ್ಲದೇ ಈ ಇಬ್ಬರು ಪೊಲೀಸ್‌ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ಆದೇಶಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೊ ಪ್ರಕರಣದಡಿ ನವೀನ್‌ ಎಂಬಾತ ಆರೋಪಿಯಾಗಿದ್ದು, ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನುಸಾರ ಎಸ್.ಐ ರೋಸಮ್ಮ ಪಿ.ಪಿ. ಅವರು ನವೀನ್‌ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸ್‌ ನಿರೀಕ್ಷಕಿ ರೇವತಿಯವರಿಗೆ ಹಸ್ತಾಂತರಿಸಿದ್ದರು. ತನಿಖಾ ಸಮಯದಲ್ಲಿ ನವೀನ್‌ ಸೀಕ್ವೇರ ಎಂಬವರನ್ನು ಬಂಧಿಸಲಾಗಿತ್ತು. ನೊಂದ ಬಾಲಕಿ ತನ್ನ ದೂರಿನಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ ಕೇವಲ ನವೀನ್‌ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು. ಆದರೆ ನವೀನ್‌ ಸಿಕ್ವೇರ ಅವರನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್‌ ಸೀಕ್ವೇರ ನಿರಪರಾಧಿ ಎಂದು ಖುಲಾಸೆಗೊಳಿಸಿದ್ದಾರೆ. ಅಲ್ಲದೇ ಪೊಲೀಸ್‌ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೇ, ನವೀನ್‌ ಸೀಕ್ವೇರ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ. ಆರೋಪಿ ಪರ ವಕೀಲರಾದ ರಾಜೇಶ್‌ ಕುಮಾರ್‌ ಅರ್ಮಾಡಿ ಮತ್ತು ಗಿರೀಶ್‌ ಶೆಟ್ಟಿ ವಾದ ಮಂಡಿಸಿದ್ದರು.

Scroll to Top