ಬುಡೋಳಿ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಟ್ಯಾಂಕರ್ ► ಚಾಲಕನಿಗೆ ಗಾಯ



(ನ್ಯೂಸ್ ಕಡಬ) newskadaba.com ವಿಟ್ಲ, ನ.20. ಟ್ಯಾಂಕರೊಂದು ಆಟೊ ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ‌‌ ಸೋಮವಾರದಂದು‌ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ.







ಗಾಯಾಳು ಆಟೋ ಚಾಲಕನನ್ನು ಬುಡೋಳಿ ನಿವಾಸಿ ಆದಂ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳಲು ತನ್ನ ಆಟೊದಲ್ಲಿ ಜನರನ್ನು ಹತ್ತಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಾಯಗೊಂಡಿದ್ದಾರೆ.






ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top