ಬೆಳ್ತಂಗಡಿ: ಹೆಚ್ಚುತ್ತಿರುವ ಹುಚ್ಚುನಾಯಿ ಹಾಗೂ ಬೀದಿನಾಯಿಗಳ ಹಾವಳಿ ➤ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂತಡ್ಕ ಕರಂಬಾರು ಹಲವು ಪ್ರದೇಶಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ಹಾವಳಿ ಆತಂಕ ಮೂಡಿಸಿದೆ.

 

ಕರಂಬಾರು ಗ್ರಾಮದ ಬಂತಡ್ಕ ಜನತಾ ಕಾಲೋನಿ ಪರಿಸರದಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮತ್ತೆ ಹುಚ್ಚು ನಾಯಿಗಳ ಹಾವಳಿ ಮುಂದುವರಿದಿದ್ದು, ಇದರ ತಡೆಗೆ ಸ್ಥಳೀಯ ಗ್ರಾಮ ಪಂಚಾಯತ್ ಶಿರ್ಲಾಲಿಗೆ ಮನವಿ ಮಾಡಿದ್ದರೂ ಇದಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಹುಚ್ಚುನಾಯಿಗಳ ಹಾವಳಿ ತಡೆಗೆ ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಜವಾಬ್ದಾರಿ ಎಂದು ಸರಕಾರ ಹೇಳಿಕೆ ಕೊಟ್ಟಿರುವುದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಿರ್ಲಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಶಿರ್ಲಾಲ್ ವಿನಂತಿಸಿದ್ದಾರೆ.

Also Read  ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..!

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಹಾಗೂ ಶಾಲಾ ಮಕ್ಕಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿದ್ದೀಕ್ ಬಂತಡ್ಕ ಆಗ್ರಹಿಸಿದ್ದಾರೆ.

error: Content is protected !!
Scroll to Top