ಮೀನು ಖಾಲಿ ಮಾಡುತ್ತಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಮೀನುಗಾರ ಮೃತ್ಯು



(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಡಿ. 02. ಆಳ ಮೀನುಗಾರಿಕೆ ನಡೆಸಿ ಬಂದು ಮೀನು ಖಾಲಿ ಮಾಡುತ್ತಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಗಂಗೊಳ್ಳಿಯ ಪಂಚಗಂಗಾವಳಿ ನದಿಯಲ್ಲಿ ನಡೆದಿದೆ.







 

ಮೃತ ಮೀನುಗಾರನನ್ನು ಒರಿಸ್ಸಾ ಮೂಲದ ಪ್ರಮೋದ್ ಮಿನ್ಜ್ (32) ಎಂದು ಗುರುತಿಸಲಾಗಿದೆ. ಪ್ರಭಾಕರ ಖಾರ್ವಿ ಮಾಲಕತ್ವದ ಶ್ರೀ ಯಕ್ಷೇಶ್ವರಿ ಬೋಟ್‌ನಲ್ಲಿ ಆನಂದ ತರಕ್ಕಿ, ಪ್ರಮೋದ್ ಮಿನ್ನ, ಪ್ರಮೋದ್ ತೋಪು ಮೊದಲಾದವರು ಆಳ ಮೀನುಗಾರಿಕೆಗೆ ತೆರಳಿದ್ದರು. ಬಳಿಕ ಮೀನುಗಾರಿಕೆ ಮುಗಿಸಿ ಗಂಗೊಳ್ಳಿ ಬಂದರು ಬಳಿ ಪಂಚಗಂಗಾವಳಿ ನದಿಯಲ್ಲಿ ಬೋಟನ್ನು ನಿಲ್ಲಿಸಿ ಬೋಟ್‌ನಿಂದ ಮೀನು ಖಾಲಿ ಮಾಡುತ್ತಿರುವಾಗ ಪ್ರಮೋದ್ ಮಿನ್ಜ್‌ ಆಕಸ್ಮಿಕವಾಗಿ ಆಯತಪ್ಪಿ ಬೋಟ್‌ನಿಂದ ನದಿನೀರಿಗೆ ಬಿದ್ದು ಕಾಣೆಯಾಗಿದ್ದರು. ನದಿಗೆ ಬಿದ್ದ ಪ್ರಮೋದ್ ಅವರ ಪತ್ತೆಗಾಗಿ ಕಳೆದ ನಾಲ್ಕು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತಾದರೂ, ಇಂದು ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top