ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ಹೊಸಮಠ ಸಿ.ಎ. ಬ್ಯಾಂಕಿನಿಂದ ಕಪಾಟು ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ನ.20. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ಸ್ಟೀಲ್ ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಕೊಡುಗೆಯನ್ನು ಹಸ್ತಾಂತರಿಸಿ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಅವರು ಮಾಧ್ಯಮಗಳು ಸಮಾಜದ ಅಗುಹೋಗುಗಳಿಗೆ ಸ್ಪಂದಿಸುವ ಮೂಲಕ ಸ್ವಸ್ಥ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸಹಕಾರ ಚಳುವಳಿಯಲ್ಲಿ ಕೂಡ ಸುದ್ದಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು. ಕೊಡುಗೆಯನ್ನು ಸ್ವೀಕರಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ  ಕೊಯಿಲ ಅವರು ಕೃತಜ್ಞತೆ ಸಮರ್ಪಿಸಿದರು. ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ್ ಎನ್.ಕೆ., ಪದಾಧಿಕಾರಿ ತಸ್ಲೀಂ ಮರ್ಧಾಳ, ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಪಿ.ವಿ., ನಿರ್ದೇಶಕರಾದ ಶಶಾಂಕ ಗೋಖಲೆ, ನೀಲಯ್ಯ ಬನಾರಿ, ಜಯಚಂದ್ರ ರೈ ಕುಂಟೋಡಿ,  ಪದ್ಮಯ್ಯ ಪೂಜಾರಿ, ಸೀತಮ್ಮ, ಧರ್ಮಾವತಿ, ಕೃಷ್ಣಪ್ಪ ದೇವಾಡಿಗ ಸನಿಲ, ಮೋಹನ ಗೌಡ ಡಿ.ಬಿ., ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸೋಮಸುಂದರ ಶೆಟ್ಟಿ ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Also Read  ಉಪ್ಪಿನಂಗಡಿ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

error: Content is protected !!
Scroll to Top