ಅಗ್ನಿ ಅವಘಡ- 10 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಡಿ, 03. ಇಲ್ಲಿನ ಗಾಂಧಿನಗರದಲ್ಲಿರುವ ಅಸೆಂಬಲ್ ವಾಟರ್ ಫಿಲ್ಟರ್ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.

ಈ ಅವಘಢ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 10 ಲಕ್ಷ ರೂಪಾಯಿ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ತಕ್ಷಣವೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Scroll to Top