ಸುಳ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ವೃದ್ದ ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭ ಅವರ ಕುತ್ತಿಗೆಯಿಂದ ಸರ ಕದ್ದೊಯ್ದು ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಲೀಂ ಪಿ.ಎ ಎಂದು ಗುರುತಿಸಲಾಗಿದೆ. ಈತ ನ. 28ರಂದು ಬೆಳಗ್ಗೆ ಜಾಲ್ಸೂರು ಗ್ರಾಮದ ಕಮಲ ಎಂಬವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿ,ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವುದಾಗಿ ಸುಳ್ಯ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಕುರಿತು ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ ಪೊಲೀಸರು ಕೇರಳದ ದೇಲಂಪಾಡಿ ಗ್ರಾಮದ ಕೊಟ್ಯಾಡಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ 45,000 ರೂ. ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ನ್ನು ವಶಪಡಿಸಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Scroll to Top