ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 03. ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ತೃತೀಯ ಬಿ.ಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top