ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗ ಸಂಭವಿಸಿದೆ.

 

ಗಾಯಗೊಂಡವರನ್ನು ಪೆರುವಾಯಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

error: Content is protected !!
Scroll to Top