ಇಂದಿನಿಂದ 1-15 ವರ್ಷದ 48 ಲಕ್ಷ ಮಕ್ಕಳಿಗೆ JE ಲಸಿಕೆ ➤ ಡಾ. ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 05. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ದಿಮಾಂದ್ಯತೆ ಸೇರಿ ಶಾಶ್ವತ ಅಂಗವಿಕಲತೆ ಉಂಟುಮಾಡುವ ಜೆಇ ಮೆದುಳು ಜ್ವರ (Japanese Encephalitis) ನಿಯಂತ್ರಣಕ್ಕಾಗಿ ಇಂದಿನಿಂದ ವಿಶೇಷ ಲಸಿಕೆ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1ರಿಂದ 15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

 

ರಾಜ್ಯದ ಜೆಇ ಎಂಡೆಮಿಕ್ ಪೀಡಿತ ಎಂದು ಗುರುತಿಸಿರುವ 10 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜೆಇ ಮೆದುಳು ಜ್ವರ ಫ್ಲೇವಿ ವೈರಸ್ ನಿಂದ ಬರುತ್ತದೆ. ಡಿಸೆಂಬರ್ ಮೊದಲ ವಾರದಲ್ಲಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯ ಇನ್ನಿತರ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group