ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Death, deadbody, Waterfall

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group