ಡಿ.14ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ 14ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ ಡಿಸೆಂಬರ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top