(ನ್ಯೂಸ್ ಕಡಬ) newskadaba.com ಹಾಸನ, ಡಿ. 07. ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಬೇಕು. ಇಲ್ಲದಿದ್ದರೆ ಅಂತಹ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದೇ ಇರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್ ಪಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಹಾಗೂ ಸಂಚಾರಿ ನಿಯಮ ಪಾಲನೆ ಮಾಡದ ವಾಹನ ಸವಾರರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದೂ ಸಹ ಪೊಲೀಸರ ಕರ್ತವ್ಯ ಎಂದು ತಿಳಿಸಿದ್ದಾರೆ.