ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.07. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ತ್ವರಿತಗೊಳಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಪ್ರತಿ ತಿಂಗಳು ಉಚಿತ ವಿದ್ಯುತ್  ಒದಗಿಸುವುದು ಸರ್ಕಾರದ ಗುರಿ. ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ. ಯೋಜನೆಯ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು. ಸಭೆಯಲ್ಲಿ ಇಂಧನ ಇಲಾಖೆ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್  ಜಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ ರಾಕೇಶ್ ಕುಮಾರ್, ಸಲಹೆಗಾರ ಡಾ|| ಇ ವೆಂಕಟಯ್ಯ, ಇ ಆಡಳಿತ ಇಲಾಖೆ ನಿರ್ದೇಕಕ ದಿಲೀಶ್ ಸಾಮಿ ಹಾಗೂ ಇಂಧನ ಇಲಾಖೆಯು ಉನ್ನತಾಧಿಕಾರಿಗಳು ಭಾಗವಹಿಸಿದ್ದರು.

Also Read  ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ

 

error: Content is protected !!
Scroll to Top