ಕುತ್ತಿಗೆಗೆ ಉರುಳುಬಿಗಿದ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆ ➤ ಅರಣ್ಯಾಧಿಕಾರಿಗಳಿಂದ ತನಿಖೆ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 08. 2 ವರ್ಷದ ಹುಲಿಯ ಶವವೊಂದು ಕುತ್ತಿಗೆಗೆ ಉರುಳು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

 

ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹುಲಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಯಾರೋ ಕಾಡು ಪ್ರಾಣಿ ಬೇಟೆಗೆ ಉರುಳು ಇಟ್ಟಿದ್ದು ಅದಕ್ಕೆ ಹುಲಿ ಸಿಲುಕಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Scroll to Top