ಬಂಟ್ವಾಳ: ಮದುವೆಯಾಗುವಂತೆ ಯುವತಿಗೆ ಪೀಡನೆ ► ಯುವಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ.21. ಯುವತಿಯೋರ್ವಳನ್ನು ಮದುವೆಯಾಗುವಂತೆ ನಿರಂತರವಾಗಿ ಪೀಡಿಸುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಮಂಗಳವಾರದಂದು ನಡೆದಿದೆ.

 

ಪೊಲೀಸರ ವಶದಲ್ಲಿರುವ ಯುವಕನನ್ನು ಬಂಟ್ವಾಳ ಅಮ್ಟಾಡಿ‌ ನಿವಾಸಿ ಅನಿಲ್ ಪಿಂಟೋ‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿ ತನ್ನನ್ನು ಮದುವೆ ಆಗುವಂತೆ ನಿತ್ಯವೂ ಪೀಡಿಸುತ್ತಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಆಕೆಗೆ ಹಾಗೂ ಆಕೆಯ ಮನೆಯವರಿಗೂ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.

ಯುವತಿಯ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಬಂಟ್ವಾಳ ನಗರ ಪೊಲೀಸರು ಅನಿಲ್ ಪಿಂಟೋನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ‌ ನಡೆಸುತ್ತಿದ್ದಾರೆ.

error: Content is protected !!
Scroll to Top