ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 08. ತೆಂಗಿನಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಅರಂತೋಡಿನಿಂದ ವರದಿಯಾಗಿದೆ.

 

ಮೃತರನ್ನು ಸುಳ್ಯದ ಅರಂತೋಡು ಬಾಲಣ್ಣರವರ ಪತ್ನಿ ಕಮಲ ಎಂದು ಗುರುತಿಸಲಾಗಿದೆ. ಇವರು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಅಡಿಕೆ ಹೆಕ್ಕುತ್ತಿದ್ದ ವೇಳೆ ಒಣಗಿದ ತೆಂಗಿನ ಮರವೊಂದು ಇವರ ಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top