ಆಗುಂಬೆ ಘಾಟ್ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಆಗುಂಬೆ, ಡಿ. 08. ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡ ಪರಿಣಾಮ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ನಡೆದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಬದಿಗೆ ಸರಿಸಿ ಇತರ ವಾಹನ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಟ್ಟರು. ಲಾರಿಯು ತಿರುವಿನಲ್ಲಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

Scroll to Top