ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಜೋಧ್ ಪುರ, ಡಿ. 09. ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮಂದಿ ಮೃತಪಟ್ಟು, ಸುಮಾರು 60 ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಜೋಧಪುರದಿಂದ ವರದಿಯಾಗಿದೆ.

 

ಮನೆಯಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮಾಹಿತಿ ನೀಡಿದ್ದಾರೆ.

error: Content is protected !!

Join the Group

Join WhatsApp Group