ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

(ನ್ಯೂಸ್ ಕಡಬ) newskadaba.com  ಹಾಸನ. ಡಿ.09. ದ್ವಿತೀಯ ಪಿಯುಸಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ನಗರದ ಸಂತ ಫಿಲೊಮಿನ ಕಾಲೇಜು ಸಭಾಂಗನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ.ಗೌಡರವರು, “ಬಡ ವಿದ್ಯಾರ್ಥಿಗಳ ಏಳಿಗೆಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ಪರಿಪೂರ್ಣವಾಗಿ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ” ಎಂದು ಸಲಹೆ ನೀಡಿದರು.

Also Read  ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?!

ಸ.ಪ.ಪೂ.ಇಲಾಖೆಯ ಉಪನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಗೋಪಾಲ್, ಕಾರ್ಯದರ್ಶಿ ಕೋಪೂರಯ್ಯ, ದೇವಾರಾಜ್, ಜಗದೀಶ್, ಕೃಷ್ಣಪ್ಪ ಸೇರಿದಂತೆ ಇತರರು ಹಾಜರಿದ್ದರು.

error: Content is protected !!
Scroll to Top