ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 09. ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ರಾ.ಹೆ 75ರ ಗೋಳಿತೊಟ್ಟು ಸರಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ.

ಇಲ್ಲಿನ ಪಿ.ಎಸ್.ಸ್ಟೋರ್ ಮಾಲಕ ಪಿ.ಎಸ್ ಮುಹಮ್ಮದ್ ಎಂಬವರು ಉಪ್ಪಿನಂಗಡಿಯಿಂದ ಮರಳಿ ಗೋಳಿತೊಟ್ಟು ಕಡೆಗೆ ಬರುತ್ತಿದ್ದ ವೇಳೆ ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top