(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ನಗರದ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.
ಈ ಕಾಲೇಜಿನಲ್ಲಿ ಡಿ. 07ರಂದು ಸಂಜೆ ಕಾರ್ಯಕ್ರಮ ನಡೆದಿದ್ದು, ಇದಾದ ಬಳಿಕ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎನ್ನಲಾಗಿದೆ.