(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 09. ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕುರಿತ ದೂರುಗಳು ಕೇಳಿಬಂದ ಹಿನ್ನೆಲೆ, ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಘಟನಾ ಸ್ಥಳದಿಂದ ಮರಳು ತುಂಬಿದ ಒಂದು ಲಾರಿ, ಮರಳು ತುಂಬಲು ನಿಲ್ಲಿಸಲಾಗಿದ್ದ ಮತ್ತೊಂದು ಲಾರಿ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಒಂದು ದೋಣಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ ಎಂಟು ಲಕ್ಷ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡಿರುವ ವಸ್ತುಗಳನ್ನು ಧರ್ಮಸ್ಥಳ ಠಾಣೆಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.