ಪ್ರೇಮಕ್ಕೆ ತಿರುಗಿದ ಇನ್ಸ್ಟಾಗ್ರಾಮ್ ಪರಿಚಯ ➤ ಲೈಂಗಿಕ ದೌರ್ಜನ್ಯ- ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ 09. ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಕಾನೂನು ಸಂಘರ್ಷಕ್ಕೊಳಗಾಗಿದ್ದ ಬಾಲಕನೋರ್ವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳಿಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಇನ್‌ಸ್ಟಾ ಗ್ರಾಮ್‌ ಮೂಲಕ ಪರಿಚಯವಾಗಿದ್ದು, ಬಳಿಕ ಆಗಾಗ್ಗೆ ಆತ ಬಾಲಕಿ ಮನೆಗೆ ಹೊಗಿ ಬರುತ್ತಿದ್ದ ಎನ್ನಲಾಗಿದೆ. ಕಳೆದ ಡಿ.02ರಂದು ರಾತ್ರಿ 8.30ರ ಸುಮಾರಿಗೆ ಬಾಲಕಿಯ ಮನೆಗೆ ಬಂದ ಆತ ಆಕೆಯನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದು, ಇದರಿಂದ ಹೆದರಿದ ಬಾಲಕಿಯು ಪೊಲೀಸರಿಗೆ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಆತನನ್ನು ರಿಮಾಂಡ್‌ ಹೋಮ್‌ಗೆ ದಾಖಲಿಸಿದೆ.

Scroll to Top