(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಡಿ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ: ಡಿ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಡಿ.16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಾಲೂಕು ಕಚೇರಿಯಲ್ಲಿ ಹಾಗೂ ಡಿ.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು. ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.