ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್​ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.

 

ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ.

 

ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತು ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸುವುದು ಮುಂತಾದ ಅನೇಕ ಸಂಚಾರ ಉಲ್ಲಂಘನೆಗಳನ್ನು ಐಟಿಎಂಎಸ್ ಪತ್ತೆ ಮಾಡಲಿದೆ. ಆದರೆ ಈ ಕ್ರಮವನ್ನು ವಾಹನ ಸವಾರರಿಂದ ದಂಡ ವಸೂಲಿ ಮಾಡಲು ಅಳವಡಿಸಲಾಗುತ್ತಿಲ್ಲ. ನಗರದಲ್ಲಿ ಸಂಚಾರ ಶಿಸ್ತು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Also Read  ? ಉಡುಪಿ: ಪೆಟ್ರೋಲ್ ಪಂಪ್ ಮಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

 

error: Content is protected !!
Scroll to Top