ಚಂಡಮಾರುತ ಎಫೆಕ್ಟ್ ➤ಬೆಂಗಳೂರು ಗಡ ಗಡ…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ತೀವ್ರ ಚಳಿಗೆ ಅಕ್ಷರಶಃ ನಡುಗಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಇನ್ನೂ ಎರಡು ಮೂರು ದಿನ ಹೀಗೆಯೇ ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ ಐದಾರು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಕುಸಿತ ದಾಖಲಾಗಿರುವುದಾಗಿ ತಿಳಿದುಬಂದಿದೆ.

 

ಶುಕ್ರವಾರ ನಸುಕಿನ ಹೊತ್ತು ದಿನದ ಕನಿಷ್ಠ ತಾಪಮಾನ 18.2 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಮಧ್ಯಾಹ್ನದ ವೇಳೆಗೆ 17.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ರಾಜ್ಯ ಹವಾಮಾನ ಕೇಂದ್ರದ ಹಿರಿಯ ಅಧಿಕಾರಿ ಎ. ಪ್ರಸಾದ್‌ ತಿಳಿಸಿದ್ದಾರೆ.

Scroll to Top