ಬೆಳ್ತಂಗಡಿ: ರಿಕ್ಷಾ – ಪಿಕಪ್ ಢಿಕ್ಕಿ ► ಎಲ್.ಕೆ.ಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.22. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ LKG ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಎಂಬಲ್ಲಿ ಬುಧವಾರದಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಾರ್ಯ ಗ್ರಾಮದ ಮುದ್ದಡ್ಕ ಮದೀನತ್ತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಮಹಮ್ಮದ್ ಸನದ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಉಳಿದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಿಕಪ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.

Scroll to Top