ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12

ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Also Read  ಪುತ್ತೂರಿನಲ್ಲಿ ಬೈಕ್ - ಆ್ಯಕ್ಟಿವಾ ನಡುವೆ ಢಿಕ್ಕಿ ► ಕಡಬ ನಿವಾಸಿ ಮೃತ್ಯು

ಧನ್ಯ ಕುಮಾರ್(37) ಎಂಬುವರು ಬೈಕ್​ನಲ್ಲಿ ಹೋಗುತ್ತಿದ್ದಾಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಧನ್ಯಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಲಾಯಿತು. ಆದರೆ ತಲೆಗೆ ಗಂಭೀರವಾಗಿ ಏಟು ಬಿದ್ದ ಹಿನ್ನೆಲೆ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ನಾವು ಎಷ್ಟೇ ಪ್ರಯತ್ನಪಟ್ಟರೂ ಅವರನ್ನು ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ

 

 

 

 

error: Content is protected !!
Scroll to Top