ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 12. ಕಾರು ಪಲ್ಟಿಯಾದ ಪರಿಣಾಮ ತಾಯಿ- ಮಗು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.

 

ಮೃತಪಟ್ಟವರನ್ನು ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ ಶಾಹಿನಾ (28) ಹಾಗೂ ಮಗು ಶಝಾ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Scroll to Top