ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.

 

ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ಹಂಪ್ ಗಮನಕ್ಕೆ ಬಾರದೇ, ಬೈಕ್ ಮೇಲಕ್ಕೆ ಹಾರಿ ಇಬ್ಬರೂ ಎಸೆಯಲ್ಪಟ್ಟು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ

 

error: Content is protected !!
Scroll to Top