(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 13. ಸುಳ್ಯ ತಾಲೂಕಿನ ಹಲವೆಡೆ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಕೇಳಿಬಂದ ದೂರಿನ ಮೇರೆಗೆ ಸ್ಥಳಗಳಿಗೆ ಲೋಕಾಯುಕ್ತ ದಾಳಿ ನಡೆಸುತ್ತಿದ್ದು, ಇದರ ಮುಂದುವರಿದ ಭಾಗವಾಗಿ ಇಂದು ಬೆಳ್ಳಂಬೆಳಗ್ಗೆ ಮಂಡೆಕೋಲು ಗಡಿಯನ್ನು ದಾಟಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವ ಮಾಹಿತಿಯ ಪ್ರಕಾರ ಕಂದಾಯ ಇಲಾಖೆ ಅಧಿಕಾರಿ ಶರತ್ ರವರು ಲಾರಿಯನ್ನು ತಡೆದು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.
ಸುಳ್ಯ ತಾಲೂಕಿನ ನಾನಾ ಕಡೆಗಳಲ್ಲಿ ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆಗಳು ನಡೆಯುತ್ತಿದ್ದು ಇದರ ವಿರುದ್ದ ಲೋಕಾಯುಕ್ತ ದಾಳಿ ನಡೆಸುತ್ತಿದ್ದು, ಇದರ ಬೆನ್ನಲ್ಲೆ ಇದೀಗ ಕಂದಾಯ ಇಲಾಖೆಯು ಎಚ್ಚೆತ್ತುಕೊಂಡು ನಿರಂತರ ದಾಳಿಗಳನ್ನು ನಡೆಸುತ್ತಿದೆ.









