ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ.13.  ಬಿಎಂಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಮೃತಪಟ್ಟ ಘಟನೆ ಪೀಣ್ಯಾದ 14ನೇ ಕ್ರಾಸ್‌ನಲ್ಲಿ ನಡೆದಿದೆ.

ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ. ಇಲ್ಲಿನ ಎಸ್.ಎಸ್.ಫ್ಯಾಬ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಬಸ್ ನ್ನು ಓವರ್‌ಟೇಕ್ ಮಾಡುವ ರಭಸದಲ್ಲಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ  ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

 

Scroll to Top