ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ‘ನಮ್ಮ ಕ್ಲಿನಿಕ್’ ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮದಡಿ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ನಿರ್ಮಿಸಲಾದ ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಕೇಂದ್ರವನ್ನು ನಾಳೆ (ಡಿ.14) ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ‌.

ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ‌ ಎಂದು ತಾಲೂಕು ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top