5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ “ಪಬ್ಲಿಕ್ ಪರೀಕ್ಷೆ” ➤ ಶಿಕ್ಷಣ ಇಲಾಖೆ ಸೂಚನೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದ್ದು, ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್.ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರಿಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ, ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ.

 

error: Content is protected !!

Join the Group

Join WhatsApp Group